ಶನಿವಾರ, ಜುಲೈ 27, 2013

ಸಂಪಾಜೆ ಶೀನಪ್ಪ ರೈ ಅವರಿಗೆ ಸರ್ಪಂಗಳ ಸುಬ್ರಹ್ಮಣ್ಯ ಭಟ್ ಪ್ರಶಸ್ತಿ

ಯಕ್ಷಗಾನ ಮತ್ತು ಇತರ ಕಲಾಪ್ರಕಾರಗಳನ್ನು ಅತೀವವಾಗಿ ಪ್ರೀತಿಸುತ್ತಿದ್ದ ಕಲಾಪೋಷಕರಾದ ದಿವಂಗತ ಸರ್ಪಂಗಳ ಸುಬ್ರಹ್ಮಣ್ಯ ಭಟ್ ಅವರ ಹೆಸರಿನಲ್ಲಿ ಅವರ ಪತ್ನಿ ಮಕ್ಕಳು ಕಳೆದ ವರ್ಷ ಆರಂಭಿಸಿದ ಪ್ರಶಸ್ತಿಯನ್ನು ನಿರಂತರ ೫೭ ವರ್ಷಗಳಿಂದ ಕಲಾಸೇವೆಗೈಯುತ್ತಿರುವ ಹಿರಿಯ ವೇಷಧಾರಿ ಸಂಪಾಜೆ ಶೀನಪ್ಪ ರೈಯವರಿಗೆ ಪ್ರದಾನ ಮಾಡಲಾಗುವುದು. ಸಮಾರಂಭವು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ದಿನಾಂಕ ೩೧-೦೭-೨೦೧೩ ರಂದು ಸಂಜೆ ೭.೦೦ ಗಂಟೆಗೆ ಪರ್ಯಾಯ ಶ್ರೀ ಸೋದೆ ವಾದಿರಾಜ ಮಠಾಧೀಶ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಜರಗಲಿದೆ. ಇದೇ ಸಂದರ್ಭದಲ್ಲಿ ತೆಂಕುತಿಟ್ಟಿನ ಹಿರಿಯ ಕಲಾವಿದರ ಕೂಡುವಿಕೆಯಲ್ಲಿ ಕಾರ್ತವೀರ್ಯಾರ್ಜುನ-ಭಾರ್ಗವ ವಿಜಯ ಯಕ್ಷಗಾನ ಪ್ರದರ್ಶನ ನಡೆಯಲಿದೆ.Sampaje_Sheenappa_Rai

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ