ಮಂಗಳವಾರ, ಜುಲೈ 23, 2013

ಕಾಪು ಸ.ಮಾ.ಹಿ.ಪ್ರಾ.ಶಾಲಾ ವಿವಿಧ ಕಾರ್ಯಕ್ರಮಗಳಿಗೆ ಸಚಿವರಿಂದ ಚಾಲನೆ

ವರದಿ-ಸುರೇಶ್ ಎರ್ಮಾಳ್
ಇಂದಿನ ಆಧುನಿಕ ಯುಗದಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಎಲ್ಲಾ ವಿಧದ ಶಿಕ್ಷಣಕ್ಕೂ ಸಕಾರಾತ್ಮಕವಾಗಿ ಒಗ್ಗಿಕೊಳ್ಳಬೇಕೆಂಬ ಹಿತದೃಷ್ಠಿಯಿಂದ ರಾಜ್ಯ ಸರ್ಕಾರವು ಕನ್ನಡ ಮಾದ್ಯಮ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಚಾಲನೆ ನೀಡಿದೆ ಎಂಬುದಾಗಿ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.ಶನಿವಾರ ಕಾಪು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಬಳಿಕ, ಸಂಸ್ಥೆಗೆ ಮಂಜೂರಾದ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯಲ್ಲಿ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ಸುಮಾರು ೧.೭೫ ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶಾಲಾ ಆವರಣಗೋಡೆಯನ್ನು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ ಉದ್ಘಾಟಿಸಿದರು.
ಕಾಪು ಗ್ರಾ.ಪಂ. ಅಧ್ಯಕ್ಷ ಉಷಾ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ತಾ.ಪಂ. ಸದಸ್ಯೆ ಶಾಂಭವಿ ಕುಲಾಲ್, ವಿದ್ಯಾನಿಕೇತನ ಸಮೂಹ ಸಂಸ್ಥೆಗಳ ಸಂಚಾಲಕ ಕೆ.ಪಿ. ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಶೆಟ್ಟಿ, ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ವಿಶ್ವನಾಥ ಕಾಪು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಲೀಲಾವತಿ, ಅಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಶಾಲಾ ಉಸ್ತುವಾರಿ ಸಮಿತಿಯ ಅಧ್ಯಕ್ಷ ಸತ್ಯನಾರಾಯಣ ವೇದಿಕೆಯಲ್ಲಿದ್ದರು.ಶಾಲಾ ಮುಖ್ಯ ಶಿಕ್ಷಕಿ ಸಾವಿತ್ರಿ ಸ್ವಾಗತಿಸಿ ವಂದಿಸಿದರು.
 20KAPU-4 b

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ