ಮಂಗಳವಾರ, ಜುಲೈ 23, 2013

ಕಾಪು ಮಹಾದೇವಿ ಪ್ರೌಢಶಾಲಾ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಸಚಿವರಿಂದ ಚಾಲನೆ

ವರದಿ-ಸುರೇಶ್ ಎರ್ಮಾಳ್
ಕಾಪುವಿನ ಮಹಾದೇವಿ ಪ್ರೌಢಶಾಲಾ ಸುವರ್ಣ ಮಹೋತ್ಸವ ಸಮಾರಂಭಕ್ಕೆ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಶನಿವಾರ ಚಾಲನೆ ನೀಡಿದ್ದಾರೆ.
ಕಾಪುವಿನ ಹಳೇ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ದೀಪ ಬೆಳಗಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಪ್ರತೀ ಮೂರು ತಿಂಗಳಿಗೊಮ್ಮೆ ಕಾಪು ಕ್ಷೇತ್ರದ ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಸಭೆ ಆಯೋಜಿಸಿ ಕುಂದು ಕೊರತೆಗಳನ್ನು ಪರಿಶೀಲನೆ ನಡೆಸಲಾಗುವುದು, ಸರ್ಕಾರಿ ಅಧಿಕಾರಿಗಳಿಂದ ಮತ್ತು ಸರ್ಕಾರಿ ಮಟ್ಟದಲ್ಲಿ ಯಾವುದೇ ರೀತಿಯ ತೊಂದರೆಗಳಿಲ್ಲದೆ ಶಿಕ್ಷಣ ಸಂಸ್ಥೆಗಳನ್ನು ಮುಂದುವರಿಸಿಕೊಂಡು ಹೋಗಲು ಪ್ರಯತ್ನಿಸಲಾಗುವುದು ಎಂದರು.
ಇದೇ ಸಂದರ್ಭ ಸುವರ್ಣ ಮಹೋತ್ಸವದ ಬೇಡಿಕೆಗಳನೋತ್ತ ಮನವಿಯನ್ನು ಸಚಿವರಿಗೆ ಹಸ್ತಾಂತರಿಸಲಾಯಿತು. ಆ ಬಳಿಕ ಸಚಿವರನ್ನು ಸಮಿತಿಯ ಪರವಾಗಿ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.
ಕಾಪು ವಿದ್ಯಾನಿಕೇತನ ಸಮೂಹ ಸಂಸ್ಥೆಗಳ ಸಂಚಾಲಕ, ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಕೆ.ಪಿ. ಆಚಾರ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಕಾಪು ಕ್ಷೇತ್ರದ ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಉಡುಪಿ ಜಿ.ಪಂ. ಸದಸ್ಯ ಕಟಪಾಡಿ ಶಂಕರ ಪೂಜಾರಿ, ಕಾಪು ಗ್ರಾ.ಪಂ. ಅಧ್ಯಕ್ಷೆ ಉಷಾ ಶೆಣೈ, ಕಾಪು ಉದ್ಯಮಿ ವಾಸುದೇವ ಶೆಟ್ಟಿ, ಕಾಪು ಗ್ರಾಮೋದ್ಧಾಕರ ಸಂಘದ ಉಪಾಧ್ಯಕ್ಷ ಶೇಖರ ಸಾಲ್ಯಾನ್, ಕಾಪು ಜನಾರ್ದನ ದೇವಳದ ಮೊಕ್ತೇಸರ ದೇವರಾಜ್ ತೊಟ್ಟಂ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಇಸ್ಮಾಯಿಲ್, ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ವಾಸುದೇವ ರಾವ್ ಇದ್ದರು.
ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಸ್ವಾಗತಿಸಿದರು, ಕಾಪು ಗ್ರಾಮೋದ್ಧಾರಕರ ಸಂಘದ ಕಾರ್ಯದರ್ಶಿ ಮಾಧವ ಆರ್.ಪಾಲನ್ ಪ್ರಸ್ತಾವನೆಗೈದರು, ಶಾಲಾ ಮುಖ್ಯ ಶಿಕ್ಷಕ ಮೋಹನ್ ಸುವರ್ಣ ವದಿಸಿದರು, ಶಾಲಾ ಸಂಚಾಲಕ ವಿದ್ಯಾಧರ್ ಪುರಾಣಿಕ್ ಹಾಗೂ ಸಮಿತಿಯ ಕಾರ್ಯದರ್ಶಿ ಶ್ರೀನಿವಾಸ್ ರಾವ್ ನಿರೂಪಿಸಿದರು.
 20KAPU-3 bb

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ