ಮಂಗಳವಾರ, ಜುಲೈ 30, 2013

ಹೆರಿಗೆ ಆಸ್ಪತ್ರೆ ಅನುದಾನ ಸ್ಥಳಾಂತರ ಮಾಡೋಕೆ ಬಿಡಲ್ಲ: ಪ್ರಮೋದ್ ಮಧ್ವರಾಜ್ ವಾಗ್ದಾನ

ಉಡುಪಿ:ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಇನ್ನಷ್ಟು ಸೌಕರ್ಯವನ್ನು ಒದಗಿಸುವ ಸಲುವಾಗಿ ಬೆಂಗಳೂರಿನ ಜಯದೇವ್ ಮತ್ತು ನಿಮಾನ್ಸ್ ಆಸ್ಪತ್ರೆಯ ಶಾಖೆಯನ್ನು ಆರಂಭಿಸುವ ಚಿಂತನೆ ನಡೆದಿದೆ. ಈ ಮೂಲಕ ಜಿಲ್ಲಾಸ್ಪತ್ರೆಯ ೧೦ ಎಕರೆ ಜಾಗವನ್ನು ದಾನಿಗಳ ಇಚ್ಛೆಯಂತೆ ಬಳಸಿಕೊಳ್ಳಲಾಗುವುದು   ಎಂದು ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಉಡುಪಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಜಿ . ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ನಿರ್ಮಾಣಗೊಂಡ ಎ‌ಆರ್‌ಟಿ ಪ್ಲಸ್ ಸೆಂಟರ್‌ನ ನೂತನ ಕಟ್ಟಡವನ್ನು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
[youtuber youtube='http://www.youtube.com/watch?v=1MMJbmQW9-o&feature=c4-overview&list=UUs0k8vSBwTqzHjMqn8PYrzQ']
೧೩. ೬ ಕೋಟಿ ರೂಪಾಯಿ ವೆಚ್ಚದಲ್ಲಿ ಜಿಲ್ಲೆಯ ಹೆರಿಗೆ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ೧೦೦ ಬೆಡ್‌ಗಳ ಸೌಕರ್ಯವನ್ನು ಒದಗಿಸುವ ಸಲುವಾಗಿ ಅನುದಾನ ಬಿಡುಗಡೆಗೊಂಡಿದೆ. ಆದರೆ ಈ ಅನುದಾನವನ್ನು ಬೇರೆ ಜಿಲ್ಲೆಗೆ ಸ್ಥಳಾಂvರಿಸುವ ಕುರಿತು ಆಗ್ರಹ ಕೇಳಿ ಬಂದಿದ್ದು ಯಾವ ಕಾರಣಕ್ಕೂ ಈ ಅನುದಾನವನ್ನು ಸ್ಥಳಾಂvರಿಗೊಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಸರಕಾರಿ ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು  ಈ ಬಗ್ಗೆ ಆರೋಗ್ಯ ಸಚಿವರ ಬಳಿ ಮಾತನಾಡಿದ್ದು ನೇಮಕಾತಿ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ ಎಂದು ಅವರು ತಿಳಿಸಿದರು.ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಉಪೇಂದ್ರ ನಾಯಕ್ ಆಸ್ಪತ್ರೆಯನ್ನು ಉದ್ಘಾಟಿಸಿದರು.
28_udupi_rti_center_ing 007
ಆಸ್ಪತ್ರೆ ಕಟ್ಟಡದ ಕುರಿತು ಮಾತನಾಡಿದ ಉಡುಪಿ ಜಿಲ್ಲಾಸ್ಪ್ರಯನ್ನು ಮೇಲ್ದರ್ಜೆಗೇರಿಸುವ ಕೆಲಸ ಅತೀ ಶೀಘ್ರವಾಗಿ ಆಗಬೇಕು. ಅಲ್ಲದೇ ಜಿಲ್ಲೆಯಲ್ಲಿ ಕ್ಯಾನ್ಸರ್ ಚಿಕಿತ್ಸೆ ಆಸ್ಪತ್ರೆಯ ತೆರೆಯುವ ಕುರಿತು ಶಾಸಕರು ಪ್ರಯತ್ನಿಸಬೇಕು ಎಂದು ಮನವಿ ಮಾಡಿಕೊಂಡರು. ಕಾಯಿಲೆ ಎಂಬುವುದು ಎಲ್ಲರಿಗೂ ಬರುತ್ತದೆ ಆದರೆ ಇದಕ್ಕೆ ಮನಸ್ಥೈರ್ಯ ತುಂಬುವ ಕೆಲಸ ಆಗಬೇಕು . ಎಲ್ಲಾ ರೋಗಿಗಳಂತೆ ಏಡ್ಸ್ ರೋಗಿಗಳಿಗೆ ಚಿಕಿತ್ಸೆ ಮತ್ತು ಸೌಕರ್ಯ ಸಿಗುವಂತಾಗಬೇಕು ಎಂದು ಅವರು ಒತ್ತಾಯಿಸಿದರು.ಉಡುಪಿ ಜಿಲ್ಲಾಧಿಕಾರಿ ಎಂ.ಟಿ. ರೇಜು ಕಟ್ಟಡದ ದಾನಿಗಳಾದ ಜಿ. ಶಂಕರ್ ಅವರನ್ನು ಸಮ್ಮಾನಿಸಿದರು.
28_udupi_rti_center_ing 008
ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಶರ್ಮ, ಜಿಲ್ಲಾ ಸರ್ಜನ್ ಆನಂದ ನಾಯ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಮಚಂದ್ರ ಬಾಯರಿ , ರಬೀಂದ್ರ ನಾಯಕ್ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ