ಮಂಗಳವಾರ, ಜುಲೈ 23, 2013

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಆಸ್ಪತ್ರೆಯಲ್ಲಿ ಸಾವು

ಕುಂದಾಪುರ: ಯುವತಿಯೋರ್ವಳು ಮನೆಯ ಕೊಠಡಿಯಲ್ಲಿ ಸೀಮೆಯೆಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ರಾತ್ರಿ ಕುಂದಾಪುರ ತಾಲೂಕಿನ ತಲ್ಲೂರು ಕೋಟೆಬಾಗಿಲು ಎಂಬಲ್ಲಿ ನಡೆದಿದ್ದು, ತೀವ್ರವಾಗಿ ಗಾಯಗೊಂಡು ಬಹುತೇಕ ಸುಟ್ಟು ಹೋಗಿರುವ ದೇಹ ಸ್ಥಿತಿಯಲ್ಲಿರುವ ಈಕೆಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Picture 005
ಜೀವನ್ಮರಣದ ಸ್ಥಿತಿಯಲ್ಲಿದ್ದ ಈಕೆ ರಾತ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.ಚೈತ್ರಾ (೧೮) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
Picture 008
ನಿತ್ಯ ತನ್ನ ಮನೆಯಲ್ಲಿ ಸೋಧರ ಮಾವನಿಂದ ಕಿರುಕುಳ ತಾಳಲಾರದೇ ಬೇಸೆತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಎನ್ನಲಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Picture 001

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ