ಮಂಗಳವಾರ, ಜುಲೈ 23, 2013

ಕುಂದಾಪುರ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ

ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಮಳೆ-ಗಾಳಿ ಪ್ರಮಾಣ ಅಧಿಕವಾಗಿದ್ದು ಕುಂದಾಪುರ ತಾಲೂಕಿನ ಶಾಲಾ-ಕಾಲೆಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ತಿಳಿಸಿದ್ದಾರೆ. ಉಡುಪಿ ಜಿಲ್ಲಾಧಿಕಾರಿಗಳ ಆದೇಶದಂತೆ ಗಾಳಿ-ಮಳೆಯ ಕಾರಣ ತಾಲೂಕಿನಲ್ಲಿ ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ತಾಲೂಕಿನ ಹಲವೆಡೆ ಮಳೆ ಕಡೆಮೆ ಇದ್ದು ಬೈಂದೂರು ವ್ಯಾಪ್ತಿಯಲ್ಲಿ ಗಾಳಿ-ಮಳೆ ಪ್ರಮಾಣ ಅತ್ಯಧಿಕವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
images uu

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ