ಶುಕ್ರವಾರ, ಜುಲೈ 19, 2013

ಕುಂದಾಪುರ: ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ರಾಜೇಶ್ ಕಾವೇರಿ

ಬಿಜೆಪಿ ಪಕ್ಷದ ಕುಂದಾಪುರ ಕ್ಷೇತ್ರ ಸಮಿತಿಯ ನೂತನ ಅಧ್ಯಕ್ಷರಾಗಿ ರಾಜೇಶ್ ಕಾವೇರಿ ಆಯ್ಕೆಯಾಗಿದ್ದಾರೆ. ಕುಂದಾಪುರದಲ್ಲಿ ಇಂದು ನಡೆದ ಶಕ್ತಿ ಕೇಂದ್ರದ ಸಭೆಯಲ್ಲಿ ಕುಂದಾಪುರದ ಚುನಾವಣಾ ಉಸ್ತುವಾರಿ ಹೊತ್ತಿರುವ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ನೂತನ ಅಧ್ಯಕ್ಷರ ಹೆಸರು ಘೋಷಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಉದಯಕುಮಾರ್ ಶೆಟ್ಟಿ, ಹಿರಿಯ ನಾಯಕರಾದ ಪುಂಡಲೀಕ ನಾಯಕ್, ಶಿವರಾಮ ಉಡುಪ, ಯುವಮೋರ್ಚಾ ಅಧ್ಯಕ್ಷ ಶಂಕರ ಅಂಕದಕಟ್ಟೆ, ಎಸ್.ಸಿ ಮೋರ್ಚಾ ಅಧ್ಯಕ್ಷ ಗೋಪಾಲ ಕಳಿಂಜೆ, ಪುರಸಭೆ ಮಾಜಿ ಅಧ್ಯಕ್ಷ ಮೋಹನದಾಸ ಶೆಣೈ, ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷ ಅಬ್ದುಲ್ ಸಿಯಾಲ್ ಮುಂತಾದವರು ಉಪಸ್ಥಿತರಿದ್ದರು.
kundapura-370x211

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ